Wildebeest analysis examples for:   kan-kan2017   ಇ    February 25, 2023 at 00:28    Script wb_pprint_html.py   by Ulf Hermjakob

2  GEN 1:2  ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
5  GEN 1:5  ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
16  GEN 1:16  ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
22  GEN 1:22  ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.
28  GEN 1:28  ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
29  GEN 1:29  ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
30  GEN 1:30  ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
35  GEN 2:4  ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.
36  GEN 2:5  ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
39  GEN 2:8  ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
40  GEN 2:9  ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
46  GEN 2:15  ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
47  GEN 2:16  ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
50  GEN 2:19  ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
59  GEN 3:3  ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
61  GEN 3:5  ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.
62  GEN 3:6  ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
69  GEN 3:13  ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
72  GEN 3:16  ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
78  GEN 3:22  ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
80  GEN 3:24  ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
87  GEN 4:7  ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
92  GEN 4:12  ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.
94  GEN 4:14  ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
95  GEN 4:15  ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
97  GEN 4:17  ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.
99  GEN 4:19  ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು.
100  GEN 4:20  ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.
101  GEN 4:21  ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿ ಮತ್ತು ಕೊಳಲುಗಳನ್ನು ನುಡಿಸುವವರ ಮೂಲ ಪುರುಷನು.
102  GEN 4:22  ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
108  GEN 5:2  ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು.
130  GEN 5:24  ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.
139  GEN 6:1  ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು
140  GEN 6:2  ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.
141  GEN 6:3  ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
142  GEN 6:4  ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
145  GEN 6:7  ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.
152  GEN 6:14  ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.
157  GEN 6:19  ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.
158  GEN 6:20  ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು.
176  GEN 7:16  ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.
191  GEN 8:7  ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.
192  GEN 8:8  ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.
193  GEN 8:9  ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
194  GEN 8:10  ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು.
195  GEN 8:11  ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.
196  GEN 8:12  ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ.
197  GEN 8:13  ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು.
198  GEN 8:14  ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿ ಒಣಗಿತ್ತು.
205  GEN 8:21  ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
206  GEN 8:22  ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.
209  GEN 9:3  ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.
210  GEN 9:4  ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.
211  GEN 9:5  ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
214  GEN 9:8  ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ,
217  GEN 9:11  ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು.
218  GEN 9:12  ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು.
219  GEN 9:13  ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.
221  GEN 9:15  ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.
223  GEN 9:17  ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು.
225  GEN 9:19  ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು.
226  GEN 9:20  ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.
232  GEN 9:26  ಅವನು ಇನ್ನೂ ನುಡಿದದ್ದೇನೆಂದರೆ, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಿರಲಿ.
239  GEN 10:4  ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.
240  GEN 10:5  ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.
244  GEN 10:9  ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.
247  GEN 10:12  ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ.
251  GEN 10:16  ಇದಲ್ಲದೆ ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,
254  GEN 10:19  ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.
255  GEN 10:20  ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.
256  GEN 10:21  ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.
260  GEN 10:25  ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.
265  GEN 10:30  ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು.
266  GEN 10:31  ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು.
267  GEN 10:32  ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.
268  GEN 11:1  ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ.
270  GEN 11:3  “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.
272  GEN 11:5  ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.
273  GEN 11:6  ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.
274  GEN 11:7  ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.