Wildebeest analysis examples for:   kan-kan2017   ಜ    February 25, 2023 at 00:28    Script wb_pprint_html.py   by Ulf Hermjakob

3  GEN 1:3  ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.
6  GEN 1:6  ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು.
10  GEN 1:10  ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.
11  GEN 1:11  ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
12  GEN 1:12  ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು
20  GEN 1:20  ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
21  GEN 1:21  ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
22  GEN 1:22  ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.
24  GEN 1:24  ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.
25  GEN 1:25  ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
28  GEN 1:28  ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
29  GEN 1:29  ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
30  GEN 1:30  ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
38  GEN 2:7  ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
40  GEN 2:9  ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
48  GEN 2:17  ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
50  GEN 2:19  ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
57  GEN 3:1  ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
62  GEN 3:6  ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
63  GEN 3:7  ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
64  GEN 3:8  ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
67  GEN 3:11  ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
68  GEN 3:12  ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
70  GEN 3:14  ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
71  GEN 3:15  ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
73  GEN 3:17  ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
78  GEN 3:22  ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
80  GEN 3:24  ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
106  GEN 4:26  ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.
142  GEN 6:4  ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
145  GEN 6:7  ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.
147  GEN 6:9  ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
155  GEN 6:17  ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
157  GEN 6:19  ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.
158  GEN 6:20  ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು.
163  GEN 7:3  ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು.
164  GEN 7:4  ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
165  GEN 7:5  ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು.
166  GEN 7:6  ಭೂಮಿಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು.
169  GEN 7:9  ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು.
170  GEN 7:10  ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು.
171  GEN 7:11  ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.
174  GEN 7:14  ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ
175  GEN 7:15  ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು.
177  GEN 7:17  ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು.
181  GEN 7:21  ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು.
182  GEN 7:22  ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು.
183  GEN 7:23  ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.
195  GEN 8:11  ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.
201  GEN 8:17  ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.
203  GEN 8:19  ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು.
204  GEN 8:20  ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.
205  GEN 8:21  ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
210  GEN 9:4  ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.
211  GEN 9:5  ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
216  GEN 9:10  ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.
217  GEN 9:11  ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು.
218  GEN 9:12  ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು.
219  GEN 9:13  ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.
221  GEN 9:15  ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.
222  GEN 9:16  ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.
223  GEN 9:17  ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು.
225  GEN 9:19  ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು.
236  GEN 10:1  ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.
240  GEN 10:5  ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.
245  GEN 10:10  ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.
254  GEN 10:19  ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.
255  GEN 10:20  ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.
262  GEN 10:27  ಹದೋರಾಮ್, ಊಜಾಲ್, ದಿಕ್ಲಾ,
264  GEN 10:29  ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು.
266  GEN 10:31  ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು.
267  GEN 10:32  ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.
269  GEN 11:2  ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು.
270  GEN 11:3  “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.
273  GEN 11:6  ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.
277  GEN 11:10  ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು.
297  GEN 11:30  ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.