Wildebeest analysis examples for:   kan-kan2017   ಷ    February 25, 2023 at 00:28    Script wb_pprint_html.py   by Ulf Hermjakob

1  GEN 1:1  ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.
16  GEN 1:16  ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
20  GEN 1:20  ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
21  GEN 1:21  ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
22  GEN 1:22  ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.
26  GEN 1:26  ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
27  GEN 1:27  ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
28  GEN 1:28  ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
30  GEN 1:30  ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
33  GEN 2:2  ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.
34  GEN 2:3  ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
36  GEN 2:5  ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
38  GEN 2:7  ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
39  GEN 2:8  ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
40  GEN 2:9  ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
44  GEN 2:13  ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
46  GEN 2:15  ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
47  GEN 2:16  ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
49  GEN 2:18  ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
50  GEN 2:19  ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
51  GEN 2:20  ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.
52  GEN 2:21  ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
53  GEN 2:22  ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
54  GEN 2:23  “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.
55  GEN 2:24  ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
56  GEN 2:25  ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
59  GEN 3:3  ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
61  GEN 3:5  ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.
62  GEN 3:6  ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
64  GEN 3:8  ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
65  GEN 3:9  ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.
68  GEN 3:12  ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
73  GEN 3:17  ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
76  GEN 3:20  ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
78  GEN 3:22  ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
79  GEN 3:23  ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
80  GEN 3:24  ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
92  GEN 4:12  ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.
93  GEN 4:13  ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ.
94  GEN 4:14  ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
95  GEN 4:15  ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
98  GEN 4:18  ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು.
100  GEN 4:20  ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.
101  GEN 4:21  ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿ ಮತ್ತು ಕೊಳಲುಗಳನ್ನು ನುಡಿಸುವವರ ಮೂಲ ಪುರುಷನು.
102  GEN 4:22  ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
103  GEN 4:23  ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
104  GEN 4:24  ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು.
106  GEN 4:26  ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.
107  GEN 5:1  ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.
108  GEN 5:2  ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು.
109  GEN 5:3  ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
110  GEN 5:4  ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು.
111  GEN 5:5  ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು.
112  GEN 5:6  ಸೇತನು ನೂರ ಐದು ವರ್ಷದವನಾದಾಗ, ಎನೋಷನನ್ನು ಪಡೆದನು.
113  GEN 5:7  ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು.
114  GEN 5:8  ಸೇತನು ಒಟ್ಟು ಒಂಭೈನೂರ ಹನ್ನೆರಡು ವರ್ಷ ಬದುಕಿ ನಂತರ ಸತ್ತನು.
115  GEN 5:9  ಎನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು.
116  GEN 5:10  ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು.
117  GEN 5:11  ಎನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು.
118  GEN 5:12  ಕೇನಾನನು ಎಪ್ಪತ್ತು ವರ್ಷದವನಾದಾಗ, ಮಹಲಲೇಲನನ್ನು ಪಡೆದನು.
119  GEN 5:13  ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು.
120  GEN 5:14  ಕೇನಾನನು ಒಟ್ಟು ಒಂಭೈನೂರ ಹತ್ತು ವರ್ಷ ಬದುಕಿ ನಂತರ ಸತ್ತನು.
121  GEN 5:15  ಮಹಲಲೇಲನು ಅರವತ್ತೈದು ವರ್ಷದವನಾದಾಗ ಯೆರೆದನನ್ನು ಪಡೆದನು.
122  GEN 5:16  ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು.
123  GEN 5:17  ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು.
124  GEN 5:18  ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನೋಕನನ್ನು ಪಡೆದನು.
125  GEN 5:19  ಹನೋಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರ್ಷ ಬದುಕಿದನು.
126  GEN 5:20  ಯೆರೆದನು ಒಟ್ಟು ಒಂಭೈನೂರ ಅರುವತ್ತೆರಡು ವರ್ಷ ಬದುಕಿ ನಂತರ ಸತ್ತನು.
127  GEN 5:21  ಹನೋಕನು ಅರುವತ್ತೈದು ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು.
128  GEN 5:22  ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.
129  GEN 5:23  ಹನೋಕನು ಬದುಕಿದ ಒಟ್ಟು ಕಾಲ ಮುನ್ನೂರ ಅರುವತ್ತೈದು ವರ್ಷಗಳು.
131  GEN 5:25  ಮೆತೂಷೆಲಹನು ನೂರ ಎಂಭತ್ತೇಳು ವರ್ಷದವನಾದಾಗ ಲೆಮೆಕನನ್ನು ಪಡೆದನು.
132  GEN 5:26  ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು.