Wildebeest analysis examples for:   kan-kan2017   ಿ    February 25, 2023 at 00:28    Script wb_pprint_html.py   by Ulf Hermjakob

1  GEN 1:1  ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.
2  GEN 1:2  ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
3  GEN 1:3  ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.
5  GEN 1:5  ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
6  GEN 1:6  ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು.
7  GEN 1:7  ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.
8  GEN 1:8  ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.
9  GEN 1:9  ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.
10  GEN 1:10  ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.
11  GEN 1:11  ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
12  GEN 1:12  ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು
13  GEN 1:13  ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.
14  GEN 1:14  ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
15  GEN 1:15  ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು.
16  GEN 1:16  ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
17  GEN 1:17  ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ
18  GEN 1:18  ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.
19  GEN 1:19  ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.
20  GEN 1:20  ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
21  GEN 1:21  ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.