Wildebeest analysis examples for:   kan-kan2017   ಣ    February 11, 2023 at 18:50    Script wb_pprint_html.py   by Ulf Hermjakob

9  GEN 1:9  ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.
10  GEN 1:10  ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.
11  GEN 1:11  ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
12  GEN 1:12  ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು
26  GEN 1:26  ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
27  GEN 1:27  ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
29  GEN 1:29  ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
35  GEN 2:4  ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.
38  GEN 2:7  ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
39  GEN 2:8  ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
47  GEN 2:16  ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
48  GEN 2:17  ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
50  GEN 2:19  ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
54  GEN 2:23  “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.
55  GEN 2:24  ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
57  GEN 3:1  ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
58  GEN 3:2  ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
59  GEN 3:3  ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
61  GEN 3:5  ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.
62  GEN 3:6  ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
63  GEN 3:7  ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
64  GEN 3:8  ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
67  GEN 3:11  ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
68  GEN 3:12  ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
70  GEN 3:14  ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
73  GEN 3:17  ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
75  GEN 3:19  ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
79  GEN 3:23  ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
81  GEN 4:1  ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.
83  GEN 4:3  ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.
84  GEN 4:4  ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.
85  GEN 4:5  ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.
87  GEN 4:7  ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
95  GEN 4:15  ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
97  GEN 4:17  ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.
102  GEN 4:22  ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
108  GEN 5:2  ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು.
110  GEN 5:4  ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು.
113  GEN 5:7  ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು.
116  GEN 5:10  ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು.
119  GEN 5:13  ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು.
122  GEN 5:16  ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು.
128  GEN 5:22  ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.
130  GEN 5:24  ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.
132  GEN 5:26  ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು.
135  GEN 5:29  ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.
136  GEN 5:30  ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು.
139  GEN 6:1  ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು
141  GEN 6:3  ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
152  GEN 6:14  ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.
154  GEN 6:16  ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.
155  GEN 6:17  ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
157  GEN 6:19  ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.
159  GEN 6:21  ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು.
160  GEN 6:22  ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.
162  GEN 7:2  ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.
163  GEN 7:3  ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು.
168  GEN 7:8  ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ, ಅಶುದ್ಧ, ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ
169  GEN 7:9  ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು.
174  GEN 7:14  ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ
176  GEN 7:16  ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.
180  GEN 7:20  ನೀರು ಆ ಬೆಟ್ಟಗಳಿಂತಲೂ ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ,
186  GEN 8:2  ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.
189  GEN 8:5  ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.
191  GEN 8:7  ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.
193  GEN 8:9  ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
195  GEN 8:11  ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.
197  GEN 8:13  ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು.
198  GEN 8:14  ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿ ಒಣಗಿತ್ತು.
217  GEN 9:11  ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು.
222  GEN 9:16  ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.
231  GEN 9:25  “ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ” ಎಂದನು.
245  GEN 10:10  ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.
246  GEN 10:11  ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,
247  GEN 10:12  ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ.
253  GEN 10:18  ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು.
254  GEN 10:19  ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.
256  GEN 10:21  ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.