Wildebeest analysis examples for:   kan-kan2017   ೋ    February 11, 2023 at 18:50    Script wb_pprint_html.py   by Ulf Hermjakob

10  GEN 1:10  ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.
26  GEN 1:26  ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
29  GEN 1:29  ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
31  GEN 1:31  ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
35  GEN 2:4  ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.
36  GEN 2:5  ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
37  GEN 2:6  ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು.
38  GEN 2:7  ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
39  GEN 2:8  ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
40  GEN 2:9  ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
41  GEN 2:10  ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.
42  GEN 2:11  ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
43  GEN 2:12  ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ.
44  GEN 2:13  ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
46  GEN 2:15  ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
47  GEN 2:16  ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
48  GEN 2:17  ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
49  GEN 2:18  ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
50  GEN 2:19  ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
52  GEN 2:21  ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
53  GEN 2:22  ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
57  GEN 3:1  ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
58  GEN 3:2  ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
59  GEN 3:3  ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
62  GEN 3:6  ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
63  GEN 3:7  ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
64  GEN 3:8  ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
65  GEN 3:9  ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.
66  GEN 3:10  ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
69  GEN 3:13  ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
70  GEN 3:14  ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
72  GEN 3:16  ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
77  GEN 3:21  ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.
78  GEN 3:22  ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
79  GEN 3:23  ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
80  GEN 3:24  ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
81  GEN 4:1  ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.
83  GEN 4:3  ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.
84  GEN 4:4  ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.
85  GEN 4:5  ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.
86  GEN 4:6  ಆಗ ಯೆಹೋವನು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ?
89  GEN 4:9  ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.
90  GEN 4:10  ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
92  GEN 4:12  ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.
93  GEN 4:13  ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ.
94  GEN 4:14  ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
95  GEN 4:15  ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
96  GEN 4:16  ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.
97  GEN 4:17  ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.
98  GEN 4:18  ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು.
106  GEN 4:26  ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.
107  GEN 5:1  ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.
109  GEN 5:3  ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
112  GEN 5:6  ಸೇತನು ನೂರ ಐದು ವರ್ಷದವನಾದಾಗ, ಎನೋಷನನ್ನು ಪಡೆದನು.
113  GEN 5:7  ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು.
115  GEN 5:9  ಎನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು.
116  GEN 5:10  ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು.
117  GEN 5:11  ಎನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು.
124  GEN 5:18  ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನೋಕನನ್ನು ಪಡೆದನು.
125  GEN 5:19  ಹನೋಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರ್ಷ ಬದುಕಿದನು.
127  GEN 5:21  ಹನೋಕನು ಅರುವತ್ತೈದು ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು.
128  GEN 5:22  ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.
129  GEN 5:23  ಹನೋಕನು ಬದುಕಿದ ಒಟ್ಟು ಕಾಲ ಮುನ್ನೂರ ಅರುವತ್ತೈದು ವರ್ಷಗಳು.
130  GEN 5:24  ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.
135  GEN 5:29  ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.
136  GEN 5:30  ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು.
138  GEN 5:32  ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.
140  GEN 6:2  ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.
141  GEN 6:3  ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
143  GEN 6:5  ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.